ಬೆಳಗಾವಿ: NIA  ದಾಳಿ; PFI , SDPI ಮುಖಂಡರ ಬಂಧನ

ಬೆಳಗಾವಿ: ದೇಶಾದ್ಯಂತ ಮತ್ತೆ ಮಂಗಳವಾರ NIA  ದಾಳಿ ಮುಂದುವರಿದಿದ್ದು, ಬೆಳಗಾವಿಯ  ಪಿಎಫ್ಐ ಹಾಗೂ ಎಸ್ಡಿಪಿಐ ಸೇರಿ ಏಳು ಮುಖಂಡರನ್ನು ಬಂಧಿಸಲಾಗಿದೆ.

ಮಂಗಳವಾ ನಸುಕಿನ ಜಾವ 4 ಗಂಟೆಗೆ ಡಿಸಿಸಿ ರವೀಂದ್ರ ಗಡಾದಿ ನೇತೃತ್ವದಲ್ಲಿ ದಾಳಿ ನಡೆಸಿ, ಆಜಂ ನಗರದ ನಿವಾಸಿ ಪಿಎಫ್ಐ ಸಂಘಟನೆಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಝಕೀವುಲ್ಲಾ ಫೈಝಿ,  ಅಸಾದ್ ಖಾನ್ ಬಡಾವಣೆ ನಿವಾಸಿ SDPI ಜಿಲ್ಲಾ ಘಟಕದ ಅಧ್ಯಕ್ಷ ಅಬೀದ್ ಖಾನ್ ಕಡೋಲಿ, ಬದ್ರುದ್ದೀನ್ ಪಟೇಲ್, ಶಿವಾಜಿ ನಗರ ನಿವಾಸಿ ಸಲಾಹುದ್ದೀನ್ ಖಿಲೆವಾಲೆ, ಅಮನ್ ನಗರ ನಿವಾಸಿ ಸಮೀಉಲ್ಲಾ ಪೀರ್ ಝಾದೆ, ಬಾಕ್ಸೈಟ್ ರೋಡ್ ಪ್ರದೇಶದ ನಿವಾಸಿ ಜಹೀರ್ ಘೀವಾಲೆ, ವಿದ್ಯಾಗಿರಿ ನಿವಾಸಿ ರೆಹಾನ್ ಅಝೀಝ್(25) ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

- Advertisement -

CRPC 110 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದು, ವೈದ್ಯಕೀಯ ತಪಾಸಣೆ ಬಳಿಕ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.