Home ಟಾಪ್ ಸುದ್ದಿಗಳು ಬೆಳಗಾವಿ: 6,975 ಕೋಟಿ ರೂ. ಮೌಲ್ಯದ ಹೆದ್ದಾರಿ ಕಾಮಗಾರಿಗೆ ನಿತಿನ್ ಗಡ್ಕರಿ ಚಾಲನೆ

ಬೆಳಗಾವಿ: 6,975 ಕೋಟಿ ರೂ. ಮೌಲ್ಯದ ಹೆದ್ದಾರಿ ಕಾಮಗಾರಿಗೆ ನಿತಿನ್ ಗಡ್ಕರಿ ಚಾಲನೆ

ಬೆಳಗಾವಿ: 6,975 ಕೋಟಿ ರೂ. ಮೌಲ್ಯದ 376 ಕಿ.ಮೀ. ಹೆದ್ದಾರಿ ಕಾಮಗಾರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.


ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿತಿನ್ ಗಡ್ಕರಿ ಅವರು ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್ ಸೇರಿ 8 ಜಿಲ್ಲೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕೇಂದ್ರ ಸರ್ಕಾರ ಈ 8 ಜಿಲ್ಲೆಗಳ 376 ಕಿ.ಮೀ ಉದ್ದದ ರಸ್ತೆಗಳಿಗೆ 6975 ಕೋಟಿ ರೂ.ಗಳ ಪ್ಯಾಕೇಜ್ ಬಿಡುಗಡೆ ಮಾಡಲಾಗಿದೆ.


ಈ ವೇಳೆ ಮಾತನಾಡಿದ ನಿತಿನ್ ಗಡ್ಕರಿ ಅವರು, ಬೆಳಗಾವಿ ಮುಂದಿನ ದಿನಗಳಲ್ಲಿ ಎಥೆನಾಲ್ ಉತ್ಪಾದನೆ ಅಷ್ಟೇ ಅಲ್ಲ, ವಿಮಾನಗಳ ಇಂಧನ ಉತ್ಪಾದನೆ ಮಾಡುವ ಕೇಂದ್ರವಾಗಲಿದೆ ಎಂದರು.

Join Whatsapp
Exit mobile version