ದಾವಣಗೆರೆ: ಬೆಳಗಾವಿ ಅಧಿವೇಶನದ ಬಳಿ ಪ್ರತಿಭಟನೆಗೆ ತೆರಳುತ್ತಿದ್ದ ಬಸ್ ಲಾರಿಗೆ ಡಿಕ್ಕಿ ಹೊಡೆದ ಘಟನೆ ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಬಸ್ ನಲ್ಲಿ ಬೆಂಗಳೂರು, ಚಿಕ್ಕಬಳ್ಳಾಪುರ, ಚಿಂತಾಮಣಿ ಮಾದಿಗ ದಂಡೋರ ಜಾಗೃತಿ ಸಮಿತಿ ಪದಾಧಿಕಾರಿಗಳು ಇದ್ದರು. ಸದಾಶಿವ ಆಯೋಗ ಜಾರಿಗೆ ಆಗ್ರಹಿಸಿ ಹೋರಾಟಗಾರರು ಪ್ರತಿಭಟನೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ 17 ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.