ಜಾಲತಾಣಗಳಲ್ಲಿ ಧಾರ್ಮಿಕ ಭಾವನೆ ಕೆರಳಿಸುವ ಸಂದೇಶ ಪೋಸ್ಟ್ ಮಾಡಿದ್ರೆ ಕಠಿಣ ಕ್ರಮ: ಬೆಳಗಾವಿ ಎಸ್ಪಿ ಎಚ್ಚರಿಕೆ

Prasthutha|

ಬೆಳಗಾವಿ: ವಾಟ್ಸಪ್ ಸ್ಟೇಟಸ್‌ ನಿಂದ ನೆರೆಯ ಕೊಲ್ಹಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ವಾಟ್ಸಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್​ ನಲ್ಲಿ ವಿವಾದಿತ ಪೋಸ್ಟ್, ಸ್ಟೇಟಸ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್​ ಎಚ್ಚರಿಕೆ ನೀಡಿದ್ದಾರೆ.

- Advertisement -

ಐಪಿಸಿ ಕಲಂ 153ಎ, 295 ಎ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಿಪ್ಪಾಣಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಎಸ್ಪಿ ಡಾ. ಸಂಜೀವ್ ಪಾಟೀಲ್​​, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತೀವ್ರ ನಿಗಾ ವಹಿಸುವಂತೆ ಸೂಚನೆ ನೀಡಿದ್ದಾರೆ.

Join Whatsapp