ಬೆಳಗಾವಿ: ವಾಟ್ಸಪ್ ಸ್ಟೇಟಸ್ ನಿಂದ ನೆರೆಯ ಕೊಲ್ಹಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ವಾಟ್ಸಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ ನಲ್ಲಿ ವಿವಾದಿತ ಪೋಸ್ಟ್, ಸ್ಟೇಟಸ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಐಪಿಸಿ ಕಲಂ 153ಎ, 295 ಎ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಿಪ್ಪಾಣಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಎಸ್ಪಿ ಡಾ. ಸಂಜೀವ್ ಪಾಟೀಲ್, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತೀವ್ರ ನಿಗಾ ವಹಿಸುವಂತೆ ಸೂಚನೆ ನೀಡಿದ್ದಾರೆ.