ಬೆಳಗಾವಿ: ಗೋವು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ ಸಂಘಪರಿವಾರ ಕಾರ್ಯಕರ್ತರಿಂದ ಹಲ್ಲೆ

Prasthutha|

ಬೆಳಗಾವಿ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಂಘಪರಿವಾರ ಕಾರ್ಯಕರ್ತರು ಲಾರಿ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯ ಸುವರ್ಣಸೌಧದ ಮುಂಭಾಗದ ಹೆದ್ದಾರಿಯಲ್ಲಿ ನಡೆದಿದೆ.

- Advertisement -

ಹಲ್ಲೆಗೊಳಗಾದ ಲಾರಿ ಚಾಲಕನನ್ನು ಕಾಸರಗೋಡು ಮೂಲದ ಉಮರ್ ಎಂದು ತಿಳಿದು ಬಂದಿದ್ದು, ಮತ್ತೋರ್ವ ಲಾರಿ ಚಾಲಕ ಸುನೀಲ್ ಕುಮಾರ್ಗೂ ಗಾಯವಾಗಿದೆ.

ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆ ಹೊರಟ್ಟಿದ್ದ ಲಾರಿಯನ್ನು ತಡೆದ ಸಂಘಪರಿವಾರ ಕಾರ್ಯಕರ್ತರು ಚಾಲಕನಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಲಾರಿ ಚಾಲಕನಿಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Join Whatsapp