ಬೆಳಗಾವಿ: ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 12ಕ್ಕೇರಿದೆ.
ಮಹಿಳೆಯ ಹೇಳಿಕೆ ಮತ್ತು ದೂರಿನ ಪ್ರಕಾರ ಒಟ್ಟು 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಗಳಾದ ಸಂತೋಷ ಬಸಪ್ಪ ನಾಯಿಕ, ಶೋಭಾ ರಾಜಪ್ಪ ನಾಯಿಕ, ಲಕ್ಕವ್ವ ಯಲ್ಲಪ್ಪ ನಾಯಿಕ ಅವರನ್ನು ಕಾಕತಿ ಪೊಲೀಸರು ಬಂಧಿಸಿದ್ದಾರೆ.
ಘಟನೆ ನಡೆದ ಬಳಿಕ ಈ ಮೂವರು ತಲೆ ಮರೆಸಿಕೊಂಡಿದ್ದರು. ಅದಾದ ಬಳಿಕ ಇಂದು ಮತ್ತೆ ಮೂವರನ್ನು ಬಂಧಿಸಿದ್ದಾರೆ.