ಬೇಲೇಕೇರಿ ಅದಿರು ನಾಪತ್ತೆ ಕೇಸ್‌: ಕಾಂಗ್ರೆಸ್ ಸತೀಶ್ ಸೈಲ್ ಗೆ 7 ವರ್ಷ ಜೈಲು

Prasthutha|

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

- Advertisement -


ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್ 24 ರಂದು ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿತ್ತು. ಇಂದು (ಅ.26) ಶಿಕ್ಷೆ ವಿಧಿಸಿದೆ.

ಕೇಸ್​ನಲ್ಲಿ ದೋಷಿ ಆಗಿರುವ ಸತೀಶ್ ಸೈಲ್ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ.ನಾಯ್ಕ್ ವಾದ ಮಂಡನೆ ಮಾಡಿದರು. ಸಿಬಿಐ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್ ಹೇಮಾ ಅವರು ವಾದ ಮಂಡನೆ ಮಾಡಿದರು. ಶಿಕ್ಷೆ ಪ್ರಕಟಣೆ ಮಾಡುವ ವೇಳೆ ಸತೀಶ್ ಸೈಲ್, ಮಹೇಶ್ ಬಿಳಿಯೆ ಅವರಿಗೆ ಜಡ್ಜ್ ಪ್ರಶ್ನೆ ಕೇಳಿದರು. ಎರಡು ಕಡೆಯ ವಾದ ಪತ್ರಿವಾದ ಆಲಿಸಿದ ಕೋರ್ಟ್​ ಅಂತಿಮವಾಗಿ ಶಿಕ್ಷೆಯನ್ನು ಪ್ರಕಟಣೆ ಮಾಡಿದೆ.

- Advertisement -

ಏನಿದು ಪ್ರಕರಣ?

ಅಕ್ರಮ ಗಣಿಗಾರಿಕೆ ಮೂಲಕ ವಿದೇಶಕ್ಕೆ ಸಾಗಿಸಲು ಕಾರವಾರದ ಬೇಲೆಕೇರಿ ಬಂದರಿಯಲ್ಲಿ 11,312 ಮೆಟ್ರಿಕ್ ಟನ್ ಅದಿರನ್ನು ಸಂಗ್ರಹಿಸಲಾಗಿತ್ತು. ಇದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದರು. ಅನುಮತಿ ಇಲ್ಲದೇ ಮಲ್ಲಿಕಾರ್ಜುನ ಶಿಪ್ಪಿಂಗ್ ಕಾರ್ಪೊರೇಷನ್ ಮಾಲೀಕರಾಗಿದ್ದ ಸತೀಶ್ ಸೈಲ್ ಅವರು ಇದನ್ನು ವಿದೇಶಕ್ಕೆ ಸಾಗಾಟ ಮಾಡುತ್ತಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕ 6 ಪ್ರಕರಣಗಳು ದಾಖಲಾಗಿದ್ದವು. ಲೋಕಾಯುಕ್ತ ಮತ್ತು ಸಿಬಿಐ ತನಿಖೆ ನಡೆಸಿ ಕೋರ್ಟ್‌ ಗೆ ಆರೋಪಪಟ್ಟಿ ಸಲ್ಲಿಸಿದ್ದವು.




Join Whatsapp