Home ಟಾಪ್ ಸುದ್ದಿಗಳು ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 128 ಜನರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 128 ಜನರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 128 ಜನರು ಅಸ್ವಸ್ಥರಾಗಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಿನ್ನೆ ನಡೆದಿದೆ.

ಗ್ರಾಮದಲ್ಲಿ ಬೀರೇಶ್ವರ ಮತ್ತು ಕರಿಯಮ್ಮನ ಜಾತ್ರೆ ನಡೆದಿತ್ತು. ಜಾತ್ರೆಯಲ್ಲಿ ಅನ್ನ ಪ್ರಸಾದ ಪ್ರಸಾದ ಸೇವಿಸಿದವರಲ್ಲಿ ಏಕಾಏಕಿ ವಾಂತಿ-ಭೇದಿ ಆರಂಭವಾಗಿದೆ.

ಹೂಲಿಕಟ್ಟಿ ಗ್ರಾಮದ ಸಿದ್ದೇಶ್ವರ ದೇವಸ್ಥಾನದಲ್ಲಿ ಪ್ರಾಥಮಿಕ ಕೇಂದ್ರ ಆರಂಭಿಸಲಾಗಿದ್ದು, ಅಸ್ವಸ್ಥಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡ ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್‌ಗೆ 17 ಜನರನ್ನು ದಾಖಲಿಸಲಾಗಿದ್ದು, ಅದರಲ್ಲಿ ಐವರು ವಯೋವೃದ್ಧರ ಸ್ಥಿತಿ ಗಂಭೀರವಾಗಿದೆ.

ರೋಗಿಗಳ ಮೇಲೆ ಪ್ರತಿ ಗಂಟೆಗೂ ನಿಗಾ ಇಡಲಾಗಿದೆ. ಗ್ರಾಮಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ತೀವ್ರ ಅಸ್ವಸ್ಥಗೊಂಡ ಐವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿಯೇ ಬೀಡು ಬಿಟ್ಟಿದ್ದಾರೆ. ತಾಲೂಕಾಧಿಕಾರಿಗಳು ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ.

ಹೂಲಿಕಟ್ಟಿ ಗ್ರಾಮಕ್ಕೆ ಶಾಸಕ ವಿಶ್ವಾಸ ವೈದ್ಯ ಭೇಟಿ ನೀಡಿದ್ದಾರೆ. ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ, ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಕರಿಯಮ್ಮನ ಜಾತ್ರೆ ಮಾಡದಂತೆ ಗ್ರಾಮಸ್ಥರಿಗೆ ಅವರು ಮನವಿ ಮಾಡಿದ್ದಾರೆ.

Join Whatsapp
Exit mobile version