ಬೆಳಗಾವಿ: ಬಿಮ್ಸ್ ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 3 ಕಂದಮ್ಮಗಳು ನಿಗೂಢ ಸಾವು

Prasthutha|

ಬೆಳಗಾವಿ: ಜಿಲ್ಲೆಯ ಬಿಮ್ಸ್ ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 3 ಹಸುಗೂಸುಗಳು ನಿಗೂಢವಾಗಿ ಸಾವನ್ನಪ್ಪಿದ್ದು ಜಿಲ್ಲೆಯ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ.

- Advertisement -

ರಾಮದುರ್ಗ ತಾಲೂಕಿನ 13 ತಿಂಗಳ ಪವಿತ್ರಾ ಹುಲಗುರ್, ಒಂದು ವರ್ಷ ಎರಡು ತಿಂಗಳ ಮಧು ಉಮೇಶ್ ಕುರಗಂದಿ ಹಾಗೂ ಒಂದೂವರೆ ವರ್ಷದ ಚೇತನಾ ಪೂಜಾರಿ ಎಂಬ ಹಸುಗೂಸುಗಳು ಬಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಈ ಮೂವರು ಮಕ್ಕಳು ಐಸಿಯುನಲ್ಲಿ ಆಮ್ಲಜನಕದ ನೆರವಿನೊಂದಿಗೆ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ, ಚಿಕಿತ್ಸೆ ಪಡೆದು ಗುಣಮುಖವಾಗಬೇಕಿದ್ದಂತ ಮೂರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ.

- Advertisement -

ಹಸುಗೂಸುಗಳು ಸಾವನ್ನಪ್ಪಿದ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ,ಆದರೆ ಈ ಘಟನೆ ಸಂಬಂಧ ಸೂಕ್ತ ನಿರ್ಧಾರ ಕೈಗೊಂಡು, ಯಾರ ತಪ್ಪಿದೆ. ಮೂರು ಕಂದಮ್ಮಗಳು ಸತ್ತಿದ್ದು ಯಾವ ಕಾರಣದಿಂದ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕಿ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಮ್ಸ್ ನಿರ್ದೇಶಕರು ತಿಳಿಸಿದ್ದಾರೆ.



Join Whatsapp