ಬೆಳಗಾವಿ: ಜಗಳದಲ್ಲಿ ಮಗುವಿನ ಎದೆಗೆ ಕಾಲಿಟ್ಟು ಕೊಂದ ಪಾಪಿ

Prasthutha|

ಬೆಳಗಾವಿ: ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದನ್ನು ಎದೆಗೆ ಕಾಲಿಟ್ಟು ಒತ್ತಿ‌ ಕೊಂದ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ಮಗು.

- Advertisement -

ಜೋತಿಭಾ ತುಕಾರಾಮ ಬಾಬಾಬರ‌ ಎಂಬಾತ ಮಗುವನ್ನು ಭೀಕರವಾಗಿ ಕೊಲೆ ಮಾಡಿದ ಆರೋಪಿ.ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ ಎನ್ನಲಾಗಿದೆ. ಮೃತ ಮಗುವಿನ ಕುಟುಂಬಸ್ಥರ ರೋದನ‌ ಮುಗಿಳು ಮುಟ್ಟಿದೆ.

ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Join Whatsapp