ಬೆಳಗಾವಿ: ಎರಡು ಗುಂಪುಗಳ ಮಧ್ಯೆ ಘರ್ಷಣೆ, ಎಂಟು ಮಂದಿಗೆ ಗಾಯ

Prasthutha|

ಬೆಳಗಾವಿ: ಕ್ರಿಕೆಟ್ ವಿಚಾರಕ್ಕೆ ಶುರುವಾದ ಸಣ್ಣ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಎರಡು ಗುಂಪುಗಳ ನಡುವಿನ ಘರ್ಷಣೆಗೆ ಕಾರಣವಾಗಿದೆ.

- Advertisement -

ಬೆಳಗಾವಿ ನಗರದ ಅಳ್ವಾನ್ ಗಲ್ಲಿಯಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದ್ದು, ಶಹಾಪುರ ಠಾಣೆಗೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಮೂರು ಕೆಎಸ್‌ಆರ್‌ಪಿ, ಮೂರು ಜನ ಸಿಪಿಐ ನಿಯೋಜನೆ ಮಾಡಲಾಗಿದೆ.

- Advertisement -

ಸಂಜೆ ಐದು ಗಂಟೆ ಸುಮಾರಿಗೆ ಚಿಕ್ಕ‌ ಮಕ್ಕಳ ನಡುವೆ ಕ್ರಿಕೆಟ್ ವಿಚಾರದಲ್ಲಿ ಗಲಾಟೆಯಾಗಿದೆ. ಬಳಿಕ ಇದರಲ್ಲಿ ಎರಡು ಗುಂಪಿನ ಯುವಕರು ಮಧ್ಯಪ್ರವೇಶಿಸಿದ್ದು, ದೊಡ್ಡಮಟ್ಟದ ಘರ್ಷಣೆ ಉಂಟಾಗಿದೆ.

ಗಲಾಟೆಯಲ್ಲಿ ಓರ್ವ ಪೊಲೀಸ್ ಪೇದೆ ಸೇರಿದಂತೆ ಎಂಟು ಜನರಿಗೆ ಗಾಯವಾಗಿದ್ದು, ಎರಡು ಕಡೆಯ ಗಾಯಾಳುಗಳಿಗೆ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Join Whatsapp