ಬೆಳಗಾವಿ: ಶಾರ್ಟ್ ಸೆರ್ಕ್ಯೂಟ್‌ನಿಂದ ಸ್ನೇಹಂ ಟೇಪ್ ಮ್ಯಾನಿಫೆಕ್ಟರ್ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡ ಘಟನೆ ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಲಿಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು ಇಡೀ ಕಾರ್ಖಾನೆಗೆ ವ್ಯಾಪಿಸಿತ್ತು. ಅಗ್ನಿ ಅವಘಡ ಸಂದರ್ಭದಲ್ಲಿ ಒಟ್ಟು 153 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಳಗಾವಿ ತಾಲ್ಲೂಕಿನ ಕವಳವಾಡಿಯ ಮಾರುತಿ ನಾರಾಯಣ ಕರವೇಕರ (32), ಜುನೇಬೆಳಗಾವಿಯ ಯಲ್ಲಪ್ಪ ಪ್ರಕಾಶ ಸಲಗುಡೆ (35), ರಾಝವಾಡಿಯ ರಂಜೀತ ದಶರಥ ಪಾಟೀಲ (39) ಗಾಯಗೊಂಡಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮೂವರ ಸ್ಥಿತಿಯೂ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕೆಎಲ್ಇ ಆಸ್ಪತ್ರೆಗೆ ಸಾಗಿಸಲಾಗಿದೆ.
ಮತ್ತೊಬ್ಬ ಕಾರ್ಮಿಕ ಯಲ್ಲಪ್ಪ ಎಂಬುವರು ನಾತ್ತೆಯಾಗಿದ್ದಾರೆ. ಸತತ 5 ಗಂಟೆಗಳಿಂದ ಹರಸಾಹಸ ಪಟ್ಟು ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಭಾರೀ ಬೆಂಕಿಯ ಹಿನ್ನೆಯಲ್ಲಿ ಹೆಚ್ಚಿನ ಪ್ರಾಣಹಾನಿ ಆತಂಕ ಸೃಷ್ಟಿಯಾಗಿತ್ತು. ಅಗ್ನಿ ಅವಘಡ ಸಂದರ್ಭದಲ್ಲಿ ಒಟ್ಟು 153 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್, ಇಡೀ ಜಿಲ್ಲಾಡಳಿತ ಸ್ಥಳದಲ್ಲಿ ಇದೆ. ಆಸ್ಪತ್ರೆಯಲ್ಲಿ 200 ಬೆಡ್ ತಯಾರಿಡಲು ಸೂಚಿಸಲಾಗಿದೆ ಎಂದಿದ್ದರು.