ಬೆಳಗಾವಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದು ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ.
ಕಿಡಿಗೇಡಿಗಳ ಕೃತ್ಯಕ್ಕೆ ಸಂಗೊಳ್ಳಿ ರಾಯಣ್ಣನ ಮೂರ್ತಿಯ ಕಾಲಿನ ಭಾಗದಲ್ಲಿ ಹಾನಿಯಾಗಿದೆ.
ವಿಷಯ ತಿಳಿದು ರಾಯಣ್ಣ ಅಭಿಮಾನಿಗಳು ಸ್ಥಳದಲ್ಲಿ ಜಮಾಯಿಸಿದ್ದು, ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.