ಬೆಳಗಾವಿ: ಕಳೆದ ವರ್ಷ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಡೆದಿದ್ದ ಅಮಾನವೀಯ ವಂಟಮೂರಿ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯ ಕಾಗವಾಡದ ಐನಾಪುರ ಗ್ರಾಮದಲ್ಲಿ ಭೂ ಒತ್ತುವರಿ ಪ್ರಶ್ನಿಸಿದ್ದಕ್ಕೆ ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆ ಆಗಿದ್ದು, ಸಂತ್ರಸ್ತೆಯ ಪುತ್ರಿ ನೀಡಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ಮೂವರು ಆರೋಪಿಗಳು 2023ರ ಜುಲೈ 31ರಂದು ನಮ್ಮ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ. 2023ರ ಆಗಸ್ಟ್ 1ರಂದು ತಮ್ಮನ ಮೇಲೂ ಹಲ್ಲೆ ಮಾಡಿದ್ದಾರೆ. ಪೊಲೀಸರಿಗೆ ದೂರು ನೀಡದಂತೆ ಜೀವ ಬೆದರಿಕೆ ಒಡ್ಡಿದ್ದರು ಎಂದು ಸಂತ್ರಸ್ತೆಯ ಪುತ್ರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಘಟನೆ ನಡೆದು ಏಳು ತಿಂಗಳಾದ ಬಳಿಕ ಬೆಳಕಿಗೆ ಬಂದಿರುವುದು ಕೆಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.