ಬೆಳಗಾವಿ ಉಪ ಚುನಾವಣೆ । ಪ್ರಚೋದನಕಾರಿ ಭಾಷಣಗಳ ಕುಖ್ಯಾತಿಯ ಮುತಾಲಿಕ್ ಗೆ ಟಿಕೆಟ್ ?

Prasthutha: March 16, 2021

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ದಿನಾಂಕ ಮಂಗಳವಾರ ಘೊಷಣೆಯಾಗಿದ್ದು ಮಾರ್ಚ್ 23 ರಂದು ಚುನಾವಣೆ ನಡೆಯಲಿದೆ. ಬೆಳಗಾವಿ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ತಯಾರಿಯನ್ನು ನಡೆಸುತ್ತಿದ್ದು ಬಿಜೆಪಿಯ ಅಭ್ಯರ್ಥಿಯಾಗಿ ಪ್ರಚೋದನಕಾರಿ ಭಾಷಣಗಳಿಗಾಗಿ ಕುಖ್ಯಾತಿ ಪಡೆದಿರುವ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಣ್ಣಹಾಕಿದ್ದು, ಹಲವೆಡೆ ಬಹಿರಂಗವಾಗಿ ತನ್ನ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.


ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿಯವರ ನಿಧನದಿಂದ ಬೆಳಗಾವಿಯಲ್ಲಿ ಉಪಚುನಾವಣೆ ಎದುರಿಸಬೇಕಾಗಿ ಬಂದಿದೆ. ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದ್ದು ಉಪ ಚುನಾವಣೆಗೆ ಮಾರ್ಚ್ 23ರಂದು ಅಧಿಸೂಚನೆ ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ.


ಇದೀಗ ಬಿಜೆಪಿ ಮುತಾಲಿಕ್ ಅವರ ಬಯಕೆ ಈಡೇರಿಸಲಿದೆಯೇ ಅಥವಾ ಅಂಗಡಿಯವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲಿದೆಯೇ ಎಂಬುವುವುದಿನ್ನೂ ನಿಗೂಢವಾಗಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಾ. ಸಾದಣ್ಣನವರ್ ಅಭ್ಯರ್ಥಿಯಾಗಿದ್ದು ಸೋಲು ಕಂಡಿದ್ದರು. ಈಗ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಾಳಯದಿಂದ ಯಾರು ಕಣಕ್ಕಿಳಿಯಲಿದ್ದಾರೆ ಎಂದು ಕಾದು ನೋಡಬೇಕಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!