ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಆಯ್ಕೆಗೊಂಡಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ವಿಡಂಬನೆಯಿಂದ ಕೂಡಿದ ಆ ಪ್ರತಿಕ್ರಿಯೆ ನಾಡಿನ ಗಮನ ಸೆಳೆದಿದೆ.
‘ಯಡಿಯೂರಪ್ಪನವರ ಮಗ’ ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ‘ಯಡಿಯೂರಪ್ಪನವರ ಮಗ’ನಿಗೆ ಅಭಿನಂದನೆಗಳು ಎಂದು ಕರ್ನಾಟಕ ಕಾಂಗ್ರೆಸ್ನ ಸೋಷಿಯಲ್ ಮೀಡಿಯಾದಲ್ಲಿ ಶುಭ ಹಾರೈಸಿದೆ.
ಮಾತ್ರವಲ್ಲ, ‘ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ’ ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂಬುದಾಗಿಯೂ ಹೇಳಿಕೊಂಡಿದೆ.
ಕಾಂಗ್ರೆಸ್ನ ಪ್ರತಿಕ್ರಿಯೆಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ.