Home Uncategorized ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂದು ನಂಬಿ: ಕಾಂಗ್ರೆಸ್ ಮನವಿ!

ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ ಎಂದು ನಂಬಿ: ಕಾಂಗ್ರೆಸ್ ಮನವಿ!

ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ, ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಆಯ್ಕೆಗೊಂಡಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ವಿಡಂಬನೆಯಿಂದ ಕೂಡಿದ ಆ ಪ್ರತಿಕ್ರಿಯೆ ನಾಡಿನ ಗಮನ ಸೆಳೆದಿದೆ.

‘ಯಡಿಯೂರಪ್ಪನವರ ಮಗ’ ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ‘ಯಡಿಯೂರಪ್ಪನವರ ಮಗ’ನಿಗೆ ಅಭಿನಂದನೆಗಳು ಎಂದು ಕರ್ನಾಟಕ ಕಾಂಗ್ರೆಸ್​ನ ಸೋಷಿಯಲ್ ಮೀಡಿಯಾದಲ್ಲಿ ಶುಭ ಹಾರೈಸಿದೆ.

ಮಾತ್ರವಲ್ಲ, ‘ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ’ ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂಬುದಾಗಿಯೂ ಹೇಳಿಕೊಂಡಿದೆ.

ಕಾಂಗ್ರೆಸ್​ನ ಪ್ರತಿಕ್ರಿಯೆಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ.

Join Whatsapp
Exit mobile version