ಬೆಳ್ಳಾರೆ: ಬಾಡಿಗೆ ಮನೆಗೆ NIA ದಾಳಿ

Prasthutha|

ಬೆಳ್ಳಾರೆ: ಎಣ್ಮೂರು ಗ್ರಾಮದ ಕಲ್ಲೇರಿಯ ಬಾಡಿಗೆ ಮನೆಯೊಂದಕ್ಕೆ ಇಂದು ಬೆಳ್ಳಂಬೆಳಿಗ್ಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ಮಾಡಿದ್ದಾರೆ.

- Advertisement -

ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಮನೆ ಇದಾಗಿದೆ ಎಂದು ತಿಳಿದು ಬಂದಿದೆ. ಕಳೆದ 2-3 ದಿನಗಳಿಂದ ಇಲ್ಲಿ ಬೀಡು ಬಿಟ್ಟಿದ್ದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇಂದು ಬೆಳಿಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ಶಸ್ತ್ರಾಸ್ತ್ರ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ.

ಸದ್ಯ ಅಧಿಕಾರಿಗಳು ಯಾರನ್ನು ವಶಕ್ಕೆ ಪಡೆದಿಲ್ಲ ಎಂದು ತಿಳಿದು ಬಂದಿದೆ.

Join Whatsapp