Home ಕರಾವಳಿ ಬೆಳ್ಳಾರೆ ಪ್ರವೀಣ್ ಹತ್ಯೆ: ಮೂರು ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ

ಬೆಳ್ಳಾರೆ ಪ್ರವೀಣ್ ಹತ್ಯೆ: ಮೂರು ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ

ರಸ್ತೆಯಲ್ಲಿ ಟಯರ್ ಗೆ ಬೆಂಕಿ; ಸುಳ್ಯ ಬಂದ್ ಗೆ ಕರೆ

ಬೆಳ್ಳಾರೆ: ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಮೂರು ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಪುತ್ತೂರು, ಸುಳ್ಯ, ಕಡಬ ಮೂರು ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಭಾರತೀಯ ದಂಡ ಸಂಹಿತೆಯ  1973 ಕಲಂ 144 ರನ್ವಯ ದಿನಾಂಕ : 27-07-2022 ಬೆಳಿಗ್ಗೆ 6.00 ಗಂಟೆಯಿಂದ ದಿನಾಂಕ 28-07-2022 ರ ಮಧ್ಯರಾತ್ರಿ 12:00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ಸುಳ್ಯದಲ್ಲಿ ಸಂಘಪರಿವಾರ ಕಾರ್ಯಕರ್ತರು ಅಂಗಡಿ ಮುಂಗಟ್ಟು ಬಂದ್ ಮಾಡಲು ಕರೆ ನೀಡಿದ್ದಾರೆ. ಖಾಸಗಿ ಬಸ್ ನಿಲ್ದಾಣ ಬಳಿ ಸಂಘಪರಿವಾರದ ಕಾರ್ಯಕರ್ತರು ರಸ್ತೆಯಲ್ಲಿ ಟೈಯರ್ ಬೆಂಕಿ ಹಚ್ಚಿ ಹತ್ತು ನಿಮಿಷಗಳ ಕಾಲ ರಸ್ತೆ ಸಂಚಾರ ಬಂದ್ ಮಾಡಿ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.

Join Whatsapp
Exit mobile version