Home ಕರಾವಳಿ ಬೆಳ್ಳಾರೆ ಪ್ರವೀಣ್ ಹತ್ಯೆ: ಮೂರು ತಾಲೂಕುಗಳಲ್ಲಿ ಬಲವಂತದಿಂದ ಅಂಗಡಿ ಬಂದ್ ಮಾಡಿಸುತ್ತಿರುವ ಸಂಘಪರಿವಾರದ ಕಾರ್ಯಕರ್ತರು

ಬೆಳ್ಳಾರೆ ಪ್ರವೀಣ್ ಹತ್ಯೆ: ಮೂರು ತಾಲೂಕುಗಳಲ್ಲಿ ಬಲವಂತದಿಂದ ಅಂಗಡಿ ಬಂದ್ ಮಾಡಿಸುತ್ತಿರುವ ಸಂಘಪರಿವಾರದ ಕಾರ್ಯಕರ್ತರು

ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಸಂಘಪರಿವಾರದ ಕಾರ್ಯಕರ್ತರು ಬಲವಂತವಾಗಿ ಅಂಗಡಿಮುಂಗಟ್ಟುಗಳು ಬಂದ್ ಮಾಡಿಸುತ್ತಿದ್ದಾರೆ.


ಸುಳ್ಯದಲ್ಲಿ ಸಂಘಪರಿವಾರದ ಕಾರ್ಯಕರ್ತರು ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಾ ಬಲವಂತವಾಗಿ ಬಂದ್ ಗೆ ಕರೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುಳ್ಯ ಹಳೆ ಗೇಟಿನಿಂದ ರಥ ಬೀದಿವರೆಗೆ ಎಲ್ಲಾ ಅಂಗಡಿಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿವೆ. ರಥ ಬೀದಿಯಿಂದ ಗಾಂಧಿನಗರದ ಕೆಲವು ಅಂಗಡಿಗಳು ಮಾತ್ರ ತೆರೆದಿವೆ. ಖಾಸಗಿ ಬಸ್ಸುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಆಟೋ ಚಾಲಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದಾರೆ.


ಮೆಡಿಕಲ್ ಅಂಗಡಿಗಳು, ಹಾಲಿನ ಅಂಗಡಿಗಳು ಎಂದಿನಂತೆ ಕಾರ್ಯಾಚರಿಸುತ್ತಿವೆ.

Join Whatsapp
Exit mobile version