Home ಟಾಪ್ ಸುದ್ದಿಗಳು ಬಳ್ಳಾರಿ: ಎಸಿ ಸ್ಫೋಟಗೊಂಡು ಮೂವರ ಸ್ಥಿತಿ ಗಂಭೀರ

ಬಳ್ಳಾರಿ: ಎಸಿ ಸ್ಫೋಟಗೊಂಡು ಮೂವರ ಸ್ಥಿತಿ ಗಂಭೀರ

ಬಳ್ಳಾರಿ: ಶಾರ್ಟ್ ಸರ್ಕ್ಯೂಟ್​ನಿಂದ ಎಸಿ ಸ್ಫೋಟಗೊಂಡು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ನಡೆದಿದೆ.

ಬೆಂಗಳೂರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಈ ಅವಘಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಛಿದ್ರಗೊಂಡಿವೆ. ಸ್ಫೋಟದ ತೀವ್ರತೆಗೆ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ. ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಗಾಯಳುಗಳನ್ನು ಇಲ್ಲಿನ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಓರ್ವ ಗಾಯಾಳುವಿನ ಸ್ಥಿತಿ ಅತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿದ್ದಾರೆ.

Join Whatsapp
Exit mobile version