ಬಳ್ಳಾರಿ | ಲಾಕ್ ಡೌನ್ ಹಿನ್ನೆಲೆಯಲ್ಲಿ ಊರಿಗೆ ಮರಳುತ್ತಿದ್ದಾಗ ಅಪಘಾತ : ನಾಲ್ವರ ದಾರುಣ ಸಾವು
Prasthutha: April 28, 2021

ಬಳ್ಳಾರಿ, ಎ.28: ಜನತಾ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ತೆರಳುವಾಗ ಲಾರಿ ಮತ್ತು ಕಾರಿನ ಮಧ್ಯೆ ಅಪಘಾತ ನಡೆದು ನಾಲ್ವರು ಸಾವನ್ನಪ್ಪಿರುವ ಘಟನೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಬಳಿ ಇಂದು ಮುಂಜಾನೆ ನಡೆದಿದೆ.
ಚಿಂಚೋಳಿ ತಾಲೂಕಿನ ಚಿಮ್ಮಾ ಈದಲಾಯಿ ಮತ್ತು ಕೊರಡಂಪಳ್ಳಿಯ ಬಳ್ಳಾರಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಭೀಮರಾವ ಬೆಳ್ಳೂರು (52), ಅವರ ಮಗ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಭೀಮರಾವ ಬೆಳ್ಳೂರು (30), ಖಾಸಗಿ ಕಂಪನಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬಿಇ ಪದವೀಧರ ಸುನೀಲ ಶಿವರಾಜ ಪಾಟೀಲ (30), ಕಾರು ಚಾಲಕ ಕೊರಡಂಪಳ್ಳಿಯ ರೇವಣಸಿದ್ದ ಬಸವರಾಜ ಕೊರಡಂಪಳ್ಳಿ(30) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು
