Home ಟಾಪ್ ಸುದ್ದಿಗಳು ಬಳ್ಳಾರಿ: ಜಿಲ್ಲೆಯಲ್ಲಿ 6 ವರ್ಷಗಳಲ್ಲಿ 2388 ಜನರಿಗೆ ಹೆಚ್.ಐ.ವಿ. ಸೋಂಕು ದೃಢ

ಬಳ್ಳಾರಿ: ಜಿಲ್ಲೆಯಲ್ಲಿ 6 ವರ್ಷಗಳಲ್ಲಿ 2388 ಜನರಿಗೆ ಹೆಚ್.ಐ.ವಿ. ಸೋಂಕು ದೃಢ

ಬಳ್ಳಾರಿ: ಜಿಲ್ಲೆಯಲ್ಲಿ 2017ರಿಂದ ಅಕ್ಟೋಬರ್ 2023 ರವರೆಗೆ 682567 ಜನರು ಐ.ಸಿ.ಟಿ.ಸಿ. ಕೇಂದ್ರಗಳಲ್ಲಿ ಆಪ್ತಸಮಾಲೋಚನೆ ಪಡೆದು ರಕ್ತ ಪರೀಕ್ಷೆಗೆ ಒಳಪಟ್ಟಿದ್ದಾರೆ. ಅವರಲ್ಲಿ 2388 ಜನರಿಗೆ ಹೆಚ್.ಐ.ವಿ. ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ. ರಮೇಶ್ ಬಾಬು ತಿಳಿಸಿದ್ದಾರೆ.

ನಗರದ ಜಿಲ್ಲಾ ಆಸ್ಪತ್ರೆಯ ಆವರಣದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 2 ಎಆರ್ ಟಿ ಕೇಂದ್ರಗಳು ಮತ್ತು 7 ಲಿಂಕ್ ಎಆರ್ ಟಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. 17336 ಸೋಂಕಿತರಿಗೆ ಪ್ರೀ ಎಆರ್ ಟಿ ದಾಖಲೆ ಮಾಡಿಕೊಂಡಿದ್ದು, ಪ್ರಸ್ತುತ 5030 ಜನರು ಚಿಕಿತ್ಸೆಯನ್ನು ಮುಂದುವರಿಸಿದ್ದು, ಸುಮಾರು 4218 ಜನರು (1988ರಿಂದ ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ) ಇದುವರೆಗೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಹೆಚ್.ಐ.ವಿ‌.ನಿಂದ ಉಂಟಾಗುತ್ತಿರುವ ಸಾವನ್ನು ತಡೆಯಲು ಹಾಗೂ ಹೆಚ್.ಐ.ವಿ/ಏಡ್ಸ್ ನಿಂದ ಉಂಟಾಗುತ್ತಿರುವ ಕಳಂಕ ಹಾಗೂ ತಾರತಮ್ಯಗಳನ್ನು ಪೂರ್ಣವಾಗಿ ಇಲ್ಲವಾಗಿಸಲು ಆರೋಗ್ಯ ಇಲಾಖೆಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದರು.

ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕದ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ ಮಾತನಾಡಿ, ಬಳ್ಳಾರಿ ಜಿಲ್ಲೆಯು ಹೆಚ್.ಐ.ವಿ ಏಡ್ಸ್ ನಿಯಂತ್ರಣಾ ಮತ್ತು ನಿರ್ವಾಹಕ ಘಟಕವು ರಾಜ್ಯದಲ್ಲಿಯೇ ಮಾದರಿಯಾಗಿದ್ದು, 2022ರಲ್ಲಿ ಅತ್ಯುತ್ತಮ ಡ್ಯಾಪ್ಕು ಎಂದು ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ ಎಂದು ಹೇಳಿದರು.

Join Whatsapp
Exit mobile version