ಬೆಳ್ತಂಗಡಿ ಜೆಡಿಎಸ್ ಅಭ್ಯರ್ಥಿ ಪತ್ರಕರ್ತ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Prasthutha|

ಬೆಳ್ತಂಗಡಿ: ಕಳೆದ ಮೂರು ದಶಕಗಳಿಂದ ಗ್ರಾಮೀಣ ವರದಿಗಾರರಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಗುರುತಿಸಿಕೊಂಡಿರುವ ಅಶ್ರಫ್ ಆಲಿಕುಂಞಿ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

- Advertisement -


ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯಾದ್ಯಕ್ಷ ಸಿ. ಎಂ. ಇಬ್ರಾಹಿಂ ಅವರು ಆಲಿಕುಂಞಿ ಅವರೇ ಸ್ಪರ್ಧಿಸಬೇಕು ಎಂದು ಸೂಚಿಸಿರುವ ಹಿನ್ನೆಲೆಯಲ್ಲಿ ಅಶ್ರಫ್ ಕಣಕ್ಕಿಳಿಸಿದ್ದಾರೆ ಎಂದು ತಿಳಿದುಬಂದಿದೆ.


ಜೈ ಕನ್ನಡಮ್ಮ, ಕರಾವಳಿ ಅಲೆ ಮೊದಲಾದ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದ ಕುಂಞಿ ಸದ್ಯ ಜಯಕಿರಣದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ.

Join Whatsapp