Home ಟಾಪ್ ಸುದ್ದಿಗಳು ಬೆಳ್ತಂಗಡಿ: ಪಟಾಕಿ ಸ್ಫೋಟ ಪ್ರಕರಣ; ಮಾಲೀಕ ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಪಟಾಕಿ ಸ್ಫೋಟ ಪ್ರಕರಣ; ಮಾಲೀಕ ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಿಂದ ಮೂವರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ.

ಸಯ್ಯದ್ ಬಶೀರ್​ ಅವರನ್ನು ಬೆಳ್ತಂಗಡಿ ಪೊಲೀಸರು ಸುಳ್ಯದಲ್ಲಿ ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಅಜ್ಞಾತಸ್ಥಳದಲ್ಲಿ ಬಶೀರ್ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಸ್ಥಳಕ್ಕೆ ತಡರಾತ್ರಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ ನೀಡಿ, ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರೆದಿದೆ.

Join Whatsapp
Exit mobile version