ಬೆಳ್ತಂಗಡಿ: ಪಿಕಪ್ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಕುಪ್ಪೆಟ್ಟಿಯಲ್ಲಿ ನಡೆದಿದೆ.
ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.