Home ಕರಾವಳಿ ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭಧರಿಸಲು ಕಾರಣಕರ್ತರಾದ ಇಬ್ಬರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.


ಆರೋಪಿಗಳಾದ ಜೆಸಿಬಿ ಚಾಲಕ ರವೀಂದ್ರ ಹಾಗೂ ಕೊಕ್ರಾಡಿಯ ಯೋಗೀಶ್ ಎಂಬವರು ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಇಬ್ಬರು ಆರೋಪಿಗಳು, ಯುವತಿಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.


ಸೆ. 27 ರಂದು ವ್ಯಾಕ್ಸಿನೇಷನ್ ಸಂದರ್ಭದಲ್ಲಿ ಆಕೆಯ ದೇಹಸ್ಥಿತಿಯನ್ನು ಗಮನಿಸಿದ ವೈದ್ಯರು, ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಬಾಲಕಿ ಘಟನೆಯ ಬಗ್ಗೆ ವೈದ್ಯರಲ್ಲಿ ತಿಳಿಸಿದ್ದಾಳೆ.


ತನ್ನ ಮೇಲೆ ಬಲಾತ್ಕಾರವಾಗಿ ಅತ್ಯಾಚಾರವೆಸಗಿ ತನ್ನನ್ನು ಗರ್ಭವತಿಯನ್ನಾಗಿಸಿದ ಆರೋಪಿಗಳಾದ ರವೀಂದ್ರ ಹಾಗೂ ಯೋಗೀಶ ಎಂಬವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಂಡು ತನಗೆ ನ್ಯಾಯ ಒದಗಿಸಿಕೊಡಬೇಕು ಎಂದು ಬಾಲಕಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Join Whatsapp
Exit mobile version