ಬೆಳ್ತಂಗಡಿ: ಮಕೂರಿನಲ್ಲಿ ಭೀಕರ ಹತ್ಯೆಗೊಳಗಾದ ಬೆಳ್ತಂಗಡಿ ತಾಲೂಕಿನ ಇಸಾಕ್, ಶಾಹುಲ್ ಹಮೀದ್ ಹಾಗೂ ಇಮ್ತಿಯಾಝ್ ಸಿದ್ದೀಕ್ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಇನಾಯತ್ ಅಲಿ, ಘಟನೆಯ ಬಗ್ಗೆ ಮಾನ್ಯ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಲ್ಲಿ ಹಾಗೂ ಗೃಹ ಸಚಿವರಲ್ಲಿ ಮಾತನಾಡಿದ್ದೇನೆ. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಲ್ಲಿಯೂ ಮನವಿ ಮಾಡಿದ್ದೇನೆ. ಕುಟುಂಬಕ್ಕೆ ಆಸರೆಯಾಗಿದ್ದವರನ್ನು ಕಳೆದುಕೊಂಡು ತೀವ್ರ ಆಘಾತಕ್ಕೊಳಕ್ಕಾಗಿರುವ ಮೃತರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರವನ್ನು ಒದಗಿಸುವಂತೆಯೂ ಮುಖ್ಯಮಂತ್ರಿಗಳಲ್ಲಿ ಕೋರಿದ್ದೇನೆಂದು ಎಂದು ತಿಳಿಸಿದ್ದಾರೆ.