ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 4 ರ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಶಾಲೆ, ಕಾಲೇಜು, ಅಂಗನವಾಡಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.