ಬೆಳ್ತಂಗಡಿ: ಕಬಡ್ಡಿ ಆಟಗಾರನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…!

Prasthutha|

ಮಂಗಳೂರು: ಬೆಳ್ತಂಗಡಿ ತಾಲೂಕು ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್(24) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

- Advertisement -

ಸ್ವರಾಜ್ ತನ್ನ ವಾಟ್ಸಾಪ್ ನಲ್ಲಿ ಅಕ್ಕನ ಮಗಳ ಫೋಟೋ ಹಾಕಿದ್ದ. ಈ ಫೋಟೋವನ್ನು ಲೋನ್ ಆ್ಯಪ್ ನವರು ಎಡಿಟ್ ಮಾಡಿ ಸ್ವರಾಜ್ ಸ್ನೇಹಿತರು, ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಗೆ ಫಾರ್ವರ್ಡ್ ಮಾಡಿದ್ದರು ಎನ್ನಲಾಗಿದೆ. ಈ ರೀತಿಯ ಬ್ಲಾಕ್ ಮೇಲ್ ತಡೆಯಲಾಗದೇ ಆಗಸ್ಟ್ 30 ರಂದು 30 ಸಾವಿರ ರೂಪಾಯಿ ಕಟ್ಟಿದ್ದ. ಆದರೂ ಇನ್ನಷ್ಟು ಹಣ ಕೊಡಬೇಕೆಂದು ಆ.31 ರಂದು ಮಧ್ಯಾಹ್ನ 2 ಗಂಟೆಗೆ ಡೆಡ್ ಲೈನ್ ನೀಡಿಲಾಗುತ್ತು.

ಇದರಿಂದ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.



Join Whatsapp