Home ಟಾಪ್ ಸುದ್ದಿಗಳು ಬೆಳ್ತಂಗಡಿ: ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಶಾಸಕ ಹರೀಶ್ ಪೂಂಜಾ..!

ಬೆಳ್ತಂಗಡಿ: ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಶಾಸಕ ಹರೀಶ್ ಪೂಂಜಾ..!

ಬೆಳ್ತಂಗಡಿ: ಕಳೆಂಜ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ಮನೆ ಅರಣ್ಯ ಜಾಗದಲ್ಲಿದೆ ಎಂಬ ಕಾರಣಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಇಂದು ಬೆಳಗ್ಗೆ ಅದನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ವಿಷಯ ತಿಳಿದು ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಅರಣ್ಯಾಧಿಕಾರಿ ವಿರುದ್ಧ ಏಕವಚನದಲ್ಲಿ ಮತ್ತು ಅವಾಚ್ಯವಾಗಿ ಬೈದಿದ್ದಾರೆ.

ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ಜಾಟಾಪಟಿ ವಿಚಾರ ಹಿನ್ನೆಲೆ ಸ್ಥಳದಲ್ಲಿ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.


ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ ಮನೆಯ ಪೌಂಡೇಶನ್ ಸಹಿತ ಅರಣ್ಯಾಧಿಕಾರಿಗಳು ತೆರವು ಮಾಡಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜಾ ಅವರು ಅರಣ್ಯ ಅಧಿಕಾರಿಗಳ ಎದುರೇ ಮತ್ತೆ ಮನೆ ನಿರ್ಮಿಸಲು ಸೂಚಿಸಿದ್ದರು. ಹೀಗಾಗಿ ಇಂದು ಕೂಡ ತೆರವು ಕಾರ್ಯಾಚರಣೆಗೆ ತೆರಳಿದ ಅರಣ್ಯಾಧಿಕಾರಿಗಳು ವಿರುದ್ಧ ಬಿಜೆಪಿ ಪ್ರತಿಭಟಿಸಿದೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕಿ ಭಗಿರಥಿ ಜಿ ಮುರುಳ್ಯ, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮಂಗಳೂರು ಉತ್ತರ ಶಾಸಕ ಭರತ್ ವೈ ಶೆಟ್ಟಿ, ಬೆಳ್ತಂಗಡಿ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಸ್ಥಳದಲ್ಲಿ ಮುಕ್ಕಾಂ ಹೂಡಿದ್ದಾರೆ. ಅಲ್ಲದೆ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅವರಿಗೆ ಹರೀಶ್ ಪೂಂಜಾ ಅವರು ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ.

Join Whatsapp
Exit mobile version