ಕಾಂಗ್ರೆಸ್ ಮುಖಂಡರು ಆಯೋಜಿಸಿದ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ..!

Prasthutha|

ರಾಯಚೂರು: ಕಾಂಗ್ರೆಸ್ ಮುಖಂಡರು ಆಯೋಜಿಸಿರುವ ಗಣೇಶೋತ್ಸವಕ್ಕೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಹರೀಶ್ ಪೂಂಜಾಗೆ ಸ್ವಾಗತ ಕೋರುವ ಬ್ಯಾನರ್ ಅನ್ನು ಕಾಂಗ್ರೆಸ್ ಮುಖಂಡರ ಹಾಕಿದ್ದು, ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೇ ಬೆದರಿಕೆ ಹಾಕಿ, ಮುಸಲ್ಮಾನರ ವಿರುದ್ಧ ದ್ವೇಷ ಭಾಷಣ ಮಾಡುವ ಬಿಜೆಪಿ ಶಾಸಕನನ್ನು ಗಣೇಶೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಕರೆದು ಸ್ವಾಗತಿಸುತ್ತಿರುವುದು ಎಷ್ಟು ಸರಿ ಎಂದು ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ.

ರಾಯಚೂರಿನ ಮಾನವಿಯಲ್ಲಿ ಶ್ರೀ ಛತ್ರಪತಿ ಶಿವಾಜಿ ಯುವಕರ ಸೇನೆ ಆಯೋಜಿಸಿರುವ ಗಣೇಶೋತ್ಸವದ ವಿಸರ್ಜನಾ ಕಾರ್ಯಕ್ರಮಕ್ಕೆ ಹರೀಶ್ ಪೂಂಜಾರನ್ನು ಮುಖ್ಯ ಅತಿಥಿಯಾಗಿ ಆಮಂತ್ರಿಸಿ ಬ್ಯಾನರ್ ಹಾಕಿದ್ದಾರೆ. ಗಣೇಶೋತ್ಸವ ವಿಸರ್ಜನಾ ಕಾರ್ಯಕ್ರಮದ ಮುಖ್ಯ ಸಂಘಟಕ ಅಲ್ಲಿನ ಕಾಂಗ್ರೆಸ್ ಮುಖಂಡ ಆಲ್ದಾಳ್ ವೀರಭದ್ರಿಯ ಪುತ್ರ ಬಸವನ ಗೌಡ ಆಲ್ದಾಳ್. ಆದರೆ ಆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಹರೀಶ್ ಪೂಂಜಾ ಆಹ್ವಾನಿಸಿರುವುದಕ್ಕೆ ಅಪಸ್ವರ ಕೇಳಿ ಬಂದಿದೆ.


ಸಚಿವರಾದ ಎನ್ ಎಸ್ ಬೋಸರಾಜು, ರಾಯಚೂರು ಜಿಲ್ಲೆಯ ಮಾನವಿಯ ಕಾಂಗ್ರೆಸ್ ಶಾಸಕ ಹಂಪಯ್ಯ ಸಾಹುಕಾರ, ಕಾಂಗ್ರೆಸ್ ಎಮ್ಮೆಲ್ಸಿ ಬಸನಗೌಡ ಬಾದರ್ಲಿ, ಸಚಿವ ಬೋಸರಾಜು ಅವರ ಪುತ್ರ, ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಹಾಗು ಇನ್ನೋರ್ವ ಕಾಂಗ್ರೆಸ್ ಮುಖಂಡ ಆಲ್ದಾಳ್ ವೀರಭದ್ರಿಯ ಮಗ ಬಸವನ ಗೌಡ ಆಲ್ದಾಳ್ ಬಿಜೆಪಿ ಶಾಸಕನನ್ನು ಸ್ವಾಗತಿಸಿ ಬ್ಯಾನರ್ ಹಾಕಿದ್ದಾರೆ.

ಬಿಜೆಪಿ, ಸಂಘ ಪರಿವಾರದ ಮುಖಂಡರ ಬಗ್ಗೆ ಕಾಂಗ್ರೆಸ್ ಸರಕಾರ ಮೃದು ಧೋರಣೆ ಅನುಸರಿಸುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.



Join Whatsapp