ಬೆಳ್ತಂಗಡಿ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿರುವ ಘಟನೆ ಲಾಯಿಲ ಜಂಕ್ಷನ್ ನಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಹಮ್ಮದ್ ರಂಝಿನ್(10) ಮೃತ ಬಾಲಕ.
ಶಾಲಾ ರಜೆಯ ಹಿನ್ನೆಲೆ ಮಹಮ್ಮದ್ ರಂಝಿನ್ ಸಂಬಂಧಿಕರ ಮನೆಗೆ ಬಂದಿದ್ದು, 11:50ರ ಸುಮಾರಿಗೆ ಅಂಗಡಿಗೆ ಹೋಗಿ ವಾಪಾಸ್ ರಸ್ತೆ ದಾಟುವಾಗ ಲಾಯಿಲ ಜಂಕ್ಷನ್ ಬಳಿ ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾನೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಬಾಲಕ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.