Home ಟಾಪ್ ಸುದ್ದಿಗಳು ಬೆಳ್ತಂಗಡಿ: ಸಿಬ್ಬಂದಿ ನಿರ್ಲಕ್ಷ್ಯ ಆರೋಪ: ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು

ಬೆಳ್ತಂಗಡಿ: ಸಿಬ್ಬಂದಿ ನಿರ್ಲಕ್ಷ್ಯ ಆರೋಪ: ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು

ಬೆಳ್ತಂಗಡಿ: ವೈದ್ಯರು ಇಲ್ಲದ ವೇಳೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಒಂದೂವರೆ ತಿಂಗಳ ಮಗು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.


ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ 1.5 ತಿಂಗಳು ಹೆಣ್ಣು ಮಗು ಅಂಶಿಕಾ ಮೃತ ಮಗು.


ಮಗುವಿನಲ್ಲಿ ಕಫ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಅಂಶಿಕಾಳನ್ನು ದಾಖಲು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡದ ಬಳಿಕ ಮಗು ಸಾವನ್ನಪ್ಪಿದೆ ಎಂದು ಮನೆಯವರು ಆರೋಪ ಮಾಡುತ್ತಿದ್ದಾರೆ.


ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಗಮಿಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Join Whatsapp
Exit mobile version