Home ಟಾಪ್ ಸುದ್ದಿಗಳು ಬೆಳ್ತಂಗಡಿ: ಸೌಜನ್ಯಾ ಮನೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗನ ಗೌಡ ಭೇಟಿ

ಬೆಳ್ತಂಗಡಿ: ಸೌಜನ್ಯಾ ಮನೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗನ ಗೌಡ ಭೇಟಿ

ಬೆಳ್ತಂಗಡಿ: ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯಾ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗನ ಗೌಡ ಅವರು ಭೇಟಿ ನೀಡಿ, ಆಕೆಯ ಕುಟುಂಬದವರ ಜೊತೆ ಮಾತುಕತೆ ನಡೆಸಿದರು.


ಸೌಜನ್ಯಾ ಮೃತದೇಹ ದೊರೆತ ಸ್ಥಳಕ್ಕೂ ಭೇಟಿ ನೀಡಿದ ಅವರು, ಸ್ಥಳೀಯ ಪೊಲೀಸರಿಂದ ಹಾಗೂ ಸೌಜನ್ಯಾ ತಾಯಿ ಕುಸುಮಾವತಿ ಹಾಗೂ ಮಾವ ವಿಠಲ ಗೌಡ ಅವರಿಂದ ಮಾಹಿತಿ ಪಡೆದುಕೊಂಡರು.


ಅನ್ಯಾಯಕ್ಕೊಳಗಾದ ಕುಟುಂಬದ ಪರವಾಗಿ ನಿಲ್ಲುತ್ತೇವೆ. ಕಾನೂನು ಪ್ರಕಾರವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಯೋಗ ಸಿದ್ದ. ಪ್ರಕರಣದ ಸಮಗ್ರ ಮಾಹಿತಿ ತಿಳಿದುಕೊಂಡು, ಮುಖ್ಯಮಂತ್ರಿ ಅವರ ಗಮನ ಸೆಳೆಯುತ್ತೇವೆ ಎಂದರು.

Join Whatsapp
Exit mobile version