ಬೆಳ್ತಂಗಡಿ: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಕುಬಲದಕಲ್ಲಿ ನಡೆದಿದೆ.
ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.
ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸಾವಾಗಿದ್ದು, ಇವರ ಹಳೆಮನೆಯಾದ ಪುದುವೆಟ್ಟುವಿನಲ್ಲಿ ಸ್ನಾನ ಮಾಡುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ವರಾಜ್ ಕಬಡ್ಡಿ ಆಟದಲ್ಲಿ ಅತ್ಯುತ್ತಮ ಆಟಗಾರನಾಗಿದ್ದು , ಉಜಿರೆಯ ಸಾನಿಧ್ಯ ಖಾಸಗಿ ಕಂಪನಿ ಒಂದರಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದರು.