ಬೆಳ್ತಂಗಡಿ: ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಸುತೇಶ್’ರವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಸುತೇಶ್’ರವರು ಹಾಗೂ ಸಿಬ್ಬಂದಿ ಜಾಗದ ವಿಚಾರವೊಂದರ ಪ್ರಕರಣದಲ್ಲಿ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿತ್ತು. ಅಲ್ಲದೆ, ಅವರ ಮೇಲೆ ಕ್ರಮಕೈಗೊಳ್ಳುವಂತೆ ವಕೀಲರ ಸಂಘದಿಂದ ಪ್ರತಿಭಟನೆ ಕೂಡ ನಡೆಸಲಾಗಿತ್ತು. ಇದೀಗ ಸಬ್ ಇನ್’ಸ್ಪೆಕ್ಟರ್ ಅವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.