ಬೆಳ್ತಂಗಡಿ: ವಿವಾಹಿತ ಮಹಿಳೆ ಆತ್ಮಹತ್ಯೆ

Prasthutha|

ಬೆಳ್ತಂಗಡಿ: ವಿವಾಹಿತ ಮಹಿಳೆಯೊಬ್ಬರು ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದ ಅಜಕ್ಕುರಿ ಎಂಬಲ್ಲಿ ನಡೆದಿದೆ.

- Advertisement -


ಚೈತ್ರಾ ಅಡಿಗ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದು ಬಂದಿದೆ.


ಮೃತ ಚೈತ್ರಾ ಮೂರು ವರ್ಷದ ಹಿಂದೆ ಧರ್ಮಸ್ಥಳದ ದೀಪಕ್ ಎಂಬವರ ಜೊತೆ ಮದುವೆಯಾಗಿದ್ದರು. ಈ ದಾಂಪತ್ಯದಲ್ಲಿ ಒಂದು ಮಗು ಇದೆ.

- Advertisement -


ಚೈತ್ರಾ ಕೆಲ ವರ್ಷದ ಹಿಂದೆ ಉಜಿರೆಯ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದ್ದರು ಎನ್ನಲಾಗಿದೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp