ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬಂಧನ?

Prasthutha|

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿರುವ ಮತ್ತು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರಿಗೆ ಬಂಧನ ಭೀತಿ ಎದುರಾಗಿದೆ.

- Advertisement -

ಬೆಳ್ತಂಗಡಿ ಪೊಲೀಸರು ಹರೀಶ್ ಪೂಂಜ ಅವರ ಗರ್ಡಾಡಿ ಗ್ರಾಮದ ಮಿತ್ತಿಲ ಮನೆಗೆ ಆಗಮಿಸಿದ್ದು, ಶಾಸಕರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರು ಪೂಂಜಾ ಮನೆಯ ಸಮೀಪ ಸೇರಿದ್ದಾರೆ.

- Advertisement -

ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ‌ದ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ ಸಂದರ್ಭ ಪೊಲೀಸರಿಗೆ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ಕ್ಷೇತ್ರದ ಶಾಸಕ ಹರೀಶ್‌ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮಂಗಳವಾರ ಎಫ್‌ ಐಆರ್‌ ದಾಖಲಿಸಿದ್ದರು.
‘ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 143 (ಕಾನೂನುಬಾಹಿರವಾಗಿ ಗುಂಪುಗೂಡುವುದು), ಸೆಕ್ಷನ್‌ 147 (ಗಲಭೆ ಸೃಷ್ಟಿ), ಸೆಕ್ಷನ್‌ 341 (ಅಕ್ರಮವಾಗಿ ನಿರ್ಬಂಧಿಸುವಿಕೆ), ಸೆಕ್ಷನ್‌ 504 (ಉದ್ದೇಶಪೂರ್ವಕವಾಗಿ ಹೀಯಾಳಿಸಿ ಪ್ರಚೋದನೆಗೆ ಒಳಪಡಿಸುವುದು), ಸೆಕ್ಷನ್‌ 506 (ಕ್ರಿಮಿನಲ್‌ ಬೆದರಿಕೆ ಒಡ್ಡುವುದು) ಜೊತೆಗೆ ಸೆಕ್ಷನ್‌ 149ರ (ಉದ್ದೇಶಪೂರ್ವಕಾಗಿ ಗುಂಪುಗೂಡಿ ಸಂಚು ರೂಪಿಸುವುದು) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಂಧಿತನಾಗಿದ್ದ  ಶಶಿರಾಜ್‌ ಶೆಟ್ಟಿ ಬಿಡುಗಡೆಗೆ ಆಗ್ರಹಿಸಿ ಪೊಲೀಸರಿಗೆ ಬೆದರಿಕೆ ಒಡ್ಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಶಾಸಕ ಹರೀಶ್‌ ಪೂಂಜ ವಿರುದ್ಧ ಭಾನುವಾರ ಎಫ್‌ಐಆರ್‌ ದಾಖಲಾಗಿತ್ತು.

ಅರಣ್ಯ ಒತ್ತುವರಿ ಮಾಡಿದ್ದವರನ್ನು ಒಕ್ಕಲೆಬ್ಬಿಸುತ್ತಿದ್ದ ಅರಣ್ಯಾಧಿಕಾರಿಗಳಿಗೆ ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಶಾಸಕ ಹರೀಶ್‌ ಪೂಂಜ ವಿರುದ್ಧ ಕೆಲ ತಿಂಗಳ ಹಿಂದೆ ಎಫ್‌ ಐಆರ್‌ ದಾಖಲಾಗಿತ್ತು.

Join Whatsapp
Exit mobile version