ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಮೇಲೆ ತಲ್ವಾರ್ ದಾಳಿ ಯತ್ನ: ಪ್ರಕರಣ ದಾಖಲು

Prasthutha|

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿದ ಘಟನೆ ನಿನ್ನೆ ತಡರಾತ್ರಿ ಫರಂಗಿಪೇಟೆ ಬಳಿ ನಡೆದಿದ್ದು, ಶಾಸಕರ ಕಾರು ಚಾಲಕ ನವೀನ್ ದೂರಿನ ಅನ್ವಯ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

ಶಾಸಕರು ರಾತ್ರಿ ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ಸಂದರ್ಭ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಬಳಿ ಕಾರ್‌ ನಲ್ಲಿ ಬಂದ ಒಂದು ತಂಡ ಶಾಸಕರ ಕಾರನ್ನು ಅಡ್ಡಗಟ್ಟಿ ದಾಳಿಗೆ ಯತ್ನಿಸಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

Join Whatsapp