Home ಟಾಪ್ ಸುದ್ದಿಗಳು ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ಇಲಿ ಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ ನಡೆದಿದೆ.

ಪುದುವೆಟ್ಟು ಗ್ರಾಮದ ಕಲ್ಲಾಜೆಯ ಅನಿತಾ (17) ಮೃತರು.

ಅನಿತಾ ನಾಲ್ಕು ದಿನದ ಹಿಂದೆ ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಳು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅನಿತಾ ಜು.3ರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದು ಮನೆಯವರಿಗೆ ಕಷ್ಟ ಕೊಡಲು ನನ್ನಿಂದ ಆಗಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

Join Whatsapp
Exit mobile version