ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಮೃತ್ಯು

Prasthutha|

ಬೆಳ್ತಂಗಡಿ: ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ನೆರಿಯ ಗ್ರಾಮದ ಪಿಲಿಕಳ ಪಂಪ್‌ ಹೌಸ್‌ ಬಳಿ ನಡೆದಿದೆ.

- Advertisement -

ಪಿಲಿಕಳ ಪಂಪ್‌ ಹೌಸ್‌ ಬಳಿಯ ನಿವಾಸಿ ಸಚಿನ್ (17) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಸಚಿನ್ ಆ. 9ರಂದು ಮನೆಯಲ್ಲಿದ್ದ ಸಂದರ್ಭ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು. ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.



Join Whatsapp