ಬೆಳ್ತಂಗಡಿ | ಶಾಲಾ ವಿದ್ಯಾರ್ಥಿಗಳಿಂದ ‘ಜೈ ಶ್ರೀರಾಮ್’ ಘೊಷಣೆ : SDPI ಖಂಡನೆ

Prasthutha|

►‘ಶಾಲಾ ವಿದ್ಯಾರ್ಥಿಗಳ ವಿವಾದಾತ್ಮಕ ಘೋಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ’

- Advertisement -

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗುರುವಾಯನಕೆರೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಕ್ಸೆಲ್ ಸೈನ್ಸ್ ವಿದ್ಯಾರ್ಥಿಗಳು ನಿನ್ನೆ (ಆ.15) ನಡೆದ ಸ್ವಾತಂತ್ರ್ಯ ದಿನಾಚರಣೆಯ ಪಥಸಂಚಲನದಲ್ಲಿ ‘ಜೈ ಶ್ರೀರಾಮ್’ ಎಂಬ ಘೋಷಣೆ ಕೂಗಿರುವುದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್ ತೀವ್ರವಾಗಿ ಖಂಡಿಸಿದ್ದಾರೆ.

ಶಾಲಾ ವಿದ್ಯಾರ್ಥಿಗಳ ವಿವಾದಾತ್ಮಕ ಘೋಷಣೆ ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನವಾಗಿದೆ. ದೇಶದ ಸ್ವಾತಂತ್ರ್ಯ ಹೋರಾಟಗಾರರು ಧರ್ಮ ಜಾತಿ ಭೇದವನ್ನು ಮರೆತು ನಮಗೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಸಂಘ ಪರಿವಾರದ ವಿವಾದಾತ್ಮಕ ಘೋಷಣೆಯಾದ  ‘ಜೈ ಶ್ರೀರಾಮ್’ ಘೋಷಣೆಯನ್ನು ಸ್ವಾತಂತ್ರ್ಯ ದಿನಾಚರಣೆಯ ರ್ಯಾಲಿಯಲ್ಲಿ ಮಕ್ಕಳ ಮೂಲಕ ಬಳಕೆ ಮಾಡಿರುವುದು ದೇಶದ ಸ್ವಾತಂತ್ರ್ಯಹೋರಾಟಗಾರರಿಗೆ ಮತ್ತು ದೇಶದ ಅಖಂಡತೆಗೆ ಮಾಡಿರುವ ದ್ರೋಹವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಮಕ್ಕಳು ದಾರಿ ತಪ್ಪದಂತೆ ಶಿಕ್ಷಕರು ಎಚ್ಚರದಿಂದ ಇರಬೇಕು. ಭಾರತೀಯರಾಗಿ ನಮ್ಮ ದೇಶಕ್ಕೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯವಾಗಿದೆ. ಮಕ್ಕಳು ಉದ್ದೇಶ ಪೂರ್ವಕವಾಗಿ ಹೀಗೆ ಮಾಡಿದ್ದಾರೋ, ಇಲ್ಲ ಪ್ರಚಾರಕ್ಕಾಗಿ ಮಾಡಿದ್ದಾರೋ ಗೊತ್ತಿಲ್ಲ. ಅವರಿಗೆ ಈ ಬಗ್ಗೆ ತಿಳಿವಳಿಕೆ ಇದೆಯೋ ಇಲ್ಲವೋ ಅದೂ ಗೊತ್ತಿಲ್ಲ. ರಾಜ್ಯ ಶಿಕ್ಷಣ ಸಚಿವರು ಮತ್ತು ಜಿಲ್ಲಾ ಶಿಕ್ಷಣಾಧಿಕಾರಿ ಇಂತಹ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಣ ಸಂಸ್ಥೆಯ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.  

Join Whatsapp