ಬೆಳ್ತಂಗಡಿ : SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Prasthutha|

ಬೆಳ್ತಂಗಡಿ:  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿಗಳ ಸಭೆಯು ಮಂಗಳವಾರ ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ನವಾಝ್ ಕಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.

- Advertisement -

ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸದಾತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಮತ್ತು ಶಾಕೀರ್ ಅಳಕೆಮಜಲು ಹಾಗೂ ಜಿಲ್ಲಾ ಸಮಿತಿ ಸದಸ್ಯ ಅಬೂಬಕ್ಕರ್ ಮದ್ದ ಅವರು ಆಗಮಿಸಿದ್ದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ 77 ನೇ  ಸ್ವಾತಂತ್ರ್ಯ ದಿನಾಚರಣೆಯನ್ನು “ಫ್ಯಾಶಿಷ್ಟರ ಸಂಕೋಲೆಯಿಂದ ದೇಶದ ಸ್ವಾತಂತ್ರ್ಯವನ್ನು ರಕ್ಷಿಸೋಣ” ಎಂಬ ಧ್ಯೇಯ ವಾಕ್ಯದೊಂದಿಗೆ ದ್ವಜಾರೋಹಣವನ್ನು ಜಿಲ್ಲಾಧ್ಯಕ್ಷರಾದ ಅನ್ವರ್ ಸದಾತ್ ಬಜತ್ತೂರು ನೆರವೇರಿಸಿದರು.

- Advertisement -

 ಕಳೆದ ಅವಧಿಯ ಪಕ್ಷದ ಚಟುವಟಿಕೆಗಳ ವರದಿ ಮಂಡಿಸಿ, ಜಿಲ್ಲಾ ವೀಕ್ಷಕರ ಸಮ್ಮುಖದಲ್ಲಿ ಕ್ಷೇತ್ರ ಸಮಿತಿಯಲ್ಲಿ ಕೆಲವೊಂದು ಬದಲಾವಣೆ ಮಾಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ನೂತನ ಸಮಿತಿಯನ್ನು ಮತ್ತು ಬ್ಲಾಕ್ ಸಮಿತಿಯನ್ನು ಅಂತರಿಕ ಚುನಾವಣೆ ಮೂಲಕ ರಚಿಸಲಾಗಿದೆ.

 ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ನವಾಝ್ ಕಟ್ಟೆ, ಉಪಾಧ್ಯಕ್ಷರಾಗಿ ಇನಾಸ್ ರೋಡ್ರಿಗಸ್, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ, ಜೊತೆ ಕಾರ್ಯದರ್ಶಿಗಳಾಗಿ ಫಝಲ್ ಉಜಿರೆ, ಸಾದಿಕ್ ಲಾಯಿಲ, ಕೋಶಾಧಿಕಾರಿಯಾಗಿ ಅಶ್ರಫ್ ಕಟ್ಟೆ ಆಯ್ಕೆಯಾದರು.

  ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಪಂಚಾಯತ್ ಸದಸ್ಯರು, ಮಹಿಳಾ ಘಟಕದ ನಾಯಕಿಯರು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮ ಸಮಿತಿ ಪದಾಧಿಕಾರಿಗಳು, ಪಕ್ಷದ ಹಿರಿಯರು ಉಪಸ್ಥಿತರಿದ್ದರು.

Join Whatsapp