ಬೆಳ್ತಂಗಡಿ | ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು

Prasthutha|

ಬೆಳ್ತಂಗಡಿ: ಆಟೋ ರಿಕ್ಷಾ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯ ಪಾರಂಕಿ ರಸ್ತೆಯ ನಡಿಬೆಟ್ಟು ಎಂಬಲ್ಲಿ ನಡೆದಿದೆ.

- Advertisement -


ಶಿವಪ್ರಸಾದ್ (19) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಅವರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿ ಎಂದು ತಿಳಿದು ಬಂದಿದೆ.


ಗಂಭೀರವಾಗಿ ಗಾಯಗೊಂಡಿದ್ದ ಶಿವಪ್ರಸಾದ್ ಅವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿಯ ವೇಳೆ ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Join Whatsapp