ಬೆಳ್ತಂಗಡಿ | ಶಾಲಾ ಮಕ್ಕಳ ಪ್ರವಾಸದ ಬಸ್’ಗಳು ಅಪಘಾತ: ಇಬ್ಬರಿಗೆ ಗಂಭೀರ ಗಾಯ

Prasthutha|

ಬೆಳ್ತಂಗಡಿ: ಶಾಲಾ ಮಕ್ಕಳ ಪ್ರವಾಸದ ಬಸ್ ಹಾಗೂ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ನಡೆದಿದೆ.

- Advertisement -


ಟೂರಿಸ್ಟ್ ಬಸ್ ಚಾಲಕ ಅಭಿಷೇಕ್ ಹಾಗೂ ಬಸ್ ಪ್ರಯಾಣಿಕ ದುಗೇಶ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಬಸ್’ನಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಅಲ್ಪ ಗಾಯಗೊಂಡಿದ್ದು, ಗಾಯಾಳುಗಳನ್ನು ಉಜಿರೆ ಹಾಗೂ ಪುತ್ತೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಪ್ರವಾಸದ ಬಸ್’ನಲ್ಲಿ ಒಟ್ಟು 40 ವಿದ್ಯಾರ್ಥಿಗಳು ಹಾಗೂ ನಾಲ್ವರು ಉಪನ್ಯಾಸಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

Join Whatsapp