Home ಟಾಪ್ ಸುದ್ದಿಗಳು ಬೆಳ್ತಂಗಡಿ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಕಲ್ಮಂಜ ಗ್ರಾಮದ ಕಜೆಯಲ್ಲಿ ನಡೆದಿದೆ.


ಕಲ್ಮಂಜ ಕಜೆ ನಿವಾಸಿ ಸುರೇಶ್ ಅವರ ಪತ್ನಿ, ಸುಂದರಿ(25) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.


ಸುಂದರಿ ಡಿ 27ರಂದು ವಿಷ ಸೇವಿಸಿದ್ದು ಬಳಿಕ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.


ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version