Home ಟಾಪ್ ಸುದ್ದಿಗಳು ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ತಾಲೂಕಿನ ಸೋಣಂದೂರಿನಲ್ಲಿ ನಡೆದಿದೆ.

ಸೋಣಂದೂರು ಮುಂಡಾಡಿ ಮನೆ ನಿವಾಸಿಯಾಗಿರುವ ಪ್ರಶಾಂತ್‌ ಮೃತಪಟ್ಟವರು.

ಪ್ರಶಾಂತ್‌ ಸೆ.18 ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೂಡಲೇ ಮನೆಯವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಘಟನೆಯ ಬಗ್ಗೆ ಮೃತನ ಸಂಬಂಧಿಯಾಗಿರುವ ಪ್ರತೀಕ್‌ ನೀಡಿರುವ ದೂರಿನಂತೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Join Whatsapp
Exit mobile version