ಬೆಳ್ತಂಗಡಿ: ಹೃದಯಾಘಾತದಿಂದ ಯುವಕ ಮೃತ್ಯು

Prasthutha|

ಬೆಳ್ತಂಗಡಿ: ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕಿರ್ನಡ್ಕದಲ್ಲಿ ನಡೆದಿದೆ.

- Advertisement -


ಕಿರ್ನಡ್ಕ ನಿವಾಸಿ ಕಿಟ್ಟಣ್ಣ ನಾಯ್ಕ ಮತ್ತು ವೇದಾವತಿ ದಂಪತಿಯ ಪುತ್ರ ಪ್ರದೀಪ್(25) ಮೃತ ಯುವಕ ಎಂದು ತಿಳಿದು ಬಂದಿದೆ. ಇವರು ಮನೆಯಲ್ಲಿರುವಾಗ ಇವರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.


ಕೂಡಲೇ ಇವರನ್ನು ಆಸ್ಪತ್ರೆಗೆ ದಾಖಲಿಸಿದರು ಆದರೆ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -


ಮೃತ ಯುವಕ ಸಹೋದರಿ ಪದ್ಮಾವತಿ, ಸಹೋದರ ನಿತೇಶ್ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Join Whatsapp